ವಿಧಾನಸಭೆಯಲ್ಲಿ ಸುದೀರ್ಘವಾಗಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಳೆ ಅನಾಹುತ ಈಗಿನಿಂದ ಆಗಿದ್ದಲ್ಲ. ಯಾವತ್ತು ಬಿಡಿಎ ಹುಟ್ಟಿಕೊಂಡಿತೋ ಆಗಲೇ ಬೆಂಗಳೂರಿಗೆ ಗಂಡಾಂತರ ಪ್ರಾರಂಭವಾಯಿತು 1999 ಈಚೆಗೆ ಐಟಿ ಕ್ಷೇತ್ರ ವೇಗವಾಗಿ ಬೆಳೆಯಲು ತೊಡಗಿತು. ಆಗ ಬೆಂಗಳೂರಿನ ಅಭಿವೃದ್ಧಿ ಬೇಕಾಬಿಟ್ಟಿ ದೊಡ್ಡ ಮಟ್ಟಿಗೆ ಆಯಿತು. ಮುಂದಾಗ ಬಹುದಾದ ಅನಾಹುತದ ಬಗ್ಗೆ ಯಾರೂ ಗಮನ ಕೊಟ್ಟಿಲ್ಲ. ಕೆರೆಗಳಿದ್ದಿದ್ದರೆ ಈ ರೀತಿ ನೆರೆ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ಕೆರೆ ಅಭಿವೃದ್ಧಿಪಡಿಸಿದ್ದರೇ ನೀರಿನ ಸಮಸ್ಯೆನೇ ಆಗುತ್ತಿರಲಿಲ್ಲ. ಮೇಕೆದಾಟುಗೆ ಪಾದಯಾತ್ರೆ ಬೇಕಾಗಿತ್ತಾ? ಮೇಕೆದಾಟಿಗಾಗಿ ಪಾದಯಾತ್ರೆ ಮಾಡುವ ಅವಶ್ಯಕತೆನೇ ಇರಲಿಲ್ಲ ಇಂದಿನ ಎಲ್ಲ ಕರ್ಮಕಾಂಡಕ್ಕೆ ಬಿಡಿಎ ಕಾರಣ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದಾರು.