ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡುವುದಿಲ್ಲ – ಎಸ್.ಟಿ ಸೋಮಶೇಖರ್

ವಿಧಾನ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ನ ಸದಸ್ಯ ನಾಗರಾಜ್ ಯಾದವ್. ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ರದ್ದು ಮಾಡಬೇಕು, ಈ ಕಾಯ್ದೆಯಿಂದ ರೈತರಿಗೆ ಅನ್ಯಾಯ ಆಗುತ್ತದೆ. ಕೇಂದ್ರ ಸರ್ಕಾರ ಈಗಾಗಲೇ ಕಾಯ್ದೆ ರದ್ದು ಮಾಡಿದೆ. ಡಬಲ್ ಎಂಜಿನ್ ಸರ್ಕಾರ ಇಲ್ಲಿ ಬೇರೆ ನಿರ್ಧಾರ ಮಾಡಿದೆ. ಇದಕ್ಕೆ ಉತ್ತರಿಸಿದ ಎಸ್‌.ಟಿ ಸೋಮಶೇಖರ್‌, ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ರಾಜ್ಯದಲ್ಲಿ ರದ್ದು ಮಾಡುವುದಿಲ್ಲ ಎಂದು ಪುನರುಚ್ಚರಿಸಿದರು. ಕೇಂದ್ರದ ಕಾಯ್ದೆ ಬೇರೆ ನಮ್ಮ ಕಾಯ್ದೆ ಬೇರೆ. ರೈತರಿಗೆ ಅನುಕೂಲ ಮಾಡಲು ಕಾಯ್ದೆ ತಿದ್ದುಪಡಿ ಮಾಡಿದ್ದೇವೆ. ರೈತರು ತಮ್ಮ ಬೆಳೆ ಎಪಿಎಂಸಿಯಲ್ಲಿ ಬೇಕಾದರೂ ಮಾರಾಟ ಮಾಡಬಹುದು ಅಥವಾ ಎಲ್ಲಿ ಬೇಕಾದ್ರು ಖಾಸಗಿಯಾಗಿ ಬೇಕಾದ್ರು ಮಾರಾಟ ಮಾಡಬಹುದು. ಅದಕ್ಕಾಗಿಯೇ ನಾವು ಕಾಯ್ದೆ ತಂದಿದ್ದೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *