ಕುಮಾರಸ್ವಾಮಿ ಬಿಜೆಪಿ ಜೊತೆ ದೋಸ್ತಿ ಮಾಡಿಕೊಂಡರೆ ಕೇಂದ್ರ ಸಚಿವ ಸ್ಥಾನ, ವಿರೋಧ ಪಕ್ಷದ ಸ್ಥಾನ ನೀಡಬಹುದು ಎಂಬ ಚರ್ಚೆಗೆ ಮೊದಲ ಬಾರಿಗೆ ಮುಕ್ತವಾಗಿ ಉತ್ತರ ನೀಡಿದ ಅವರು, ನನಗೆ ಕೇಂದ್ರ ಸಚಿವ ಸ್ಥಾನ ಅಥವಾ ವಿಪಕ್ಷ ಸ್ಥಾನದ ಅವಶ್ಯಕತೆ ಇಲ್ಲ. ಅದರ ಚರ್ಚೆಯೂ ಮಾಡಲ್ಲ. ಬಿಜೆಪಿಯಲ್ಲಿ ಸಮರ್ಥರು ಇದ್ದಾರೆ. ಅವರನ್ನು ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಿ ಎಂದು ಕೇಂದ್ರದ ನಾಯಕರಿಗೆ ಹೇಳುತ್ತೇನೆ ಎಂದರು. ಜನರು ಕೊಟ್ಟ ಸ್ಥಾನದಲ್ಲಿ ಕೂರಲು ನಾನು ಸಿದ್ಧ ಎಂದು ತಿಳಿಸಿದ ಅವರು, ಎನ್ಡಿಎ ಮತ್ತು ಯುಪಿಎ ಸಭೆಗೆ ಇನ್ನೂ ನನಗೆ ಆಹ್ವಾನ ಬಂದಿಲ್ಲ. ಯುಪಿಎ ಸಭೆಗೆ ಆಹ್ವಾನ ಬಂದರೂ ನಾವು ಹೋಗಲ್ಲ. ಎನ್ಡಿಎ ಸಭೆಗೆ ಆಹ್ವಾನ ಬಂದರೆ ಹೋಗಿ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.