ಯುಪಿಎ ಸರ್ಕಾರ 12 ಲಕ್ಷ ಕೋಟಿ ರೂಪಾಯಿ ಮೊತ್ತದ ಹಗರಣದಲ್ಲಿ ಭಾಗಿಯಾಗಿದೆ: ಅಮಿತ್ ಶಾ ಗಂಭೀರ ಆರೋಪ

ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದಾಗಿ 42,000 ಜನರ ಸಾವಿಗೆ ಯಾರು ಹೊಣೆಗಾರಿಕೆ ತೆಗೆದುಕೊಳ್ಳುತ್ತಾರೆ..? “ಮೂರು ಕುಟುಂಬಗಳು ಒಟ್ಟಾಗಿ ದಶಕಗಳ ಕಾಲ ಜಮ್ಮು ಮತ್ತು ಕಾಶ್ಮೀರವನ್ನು ಆಳಿದವು. ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಕಾರಣ. ಭಯೋತ್ಪಾದನೆಯಿಂದಾಗಿ 42,000 ಜನರು ಸಾವನ್ನಪ್ಪಿದ್ದಾರೆ. 370 ನೇ ವಿಧಿಯಿಂದಾಗಿ ಯಾವುದೇ ಅಭಿವೃದ್ಧಿ ಕಂಡುಬಂದಿಲ್ಲ. ಮತ್ತು ನಾವು ಆರ್ಟಿಕಲ್ 370 ಅನ್ನು ರಕ್ಷಿಸಬೇಕು ಎಂದು ಅವರು ಹೇಳುತ್ತಿದ್ದಾರೆ”. ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 12 ಲಕ್ಷ ಕೋಟಿ ರೂಪಾಯಿ ಮೊತ್ತದ ಹಗರಣಗಳಲ್ಲಿ ಭಾಗಿಯಾಗಿದ್ದ ಯುಪಿಎ ಸರಕಾರವನ್ನು ಮೋದಿಯವರು ಬದಲಾಯಿಸಿದ್ದಾರೆ.ಭ್ರಷ್ಟಾಚಾರ ಮುಕ್ತ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭದ್ರ ಬುನಾದಿ ಹಾಕಿದ್ದಾರೆ” ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಯೋತ್ಪಾದನೆಯ ಸುತ್ತಲಿನ ಕುಣಿಕೆಯನ್ನು ಬಿಗಿಗೊಳಿಸಲಾಗಿದೆ.ಎಂದು ಜಮ್ಮುವಿನಲ್ಲಿ ಸಾರ್ವಜನಿಕ ಸಬೆಯನ್ನುದ್ದೇಶಿಸಿ ಅಮಿತ್ ಶಾ ಹೇಳಿದ್ದಾರೆ.

Leave a Reply

Your email address will not be published. Required fields are marked *