ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಆರು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಲಿದ್ದು, ಉತ್ತರ ಪ್ರದೇಶದ ದೀರ್ಘಾವಧಿಯ ಮುಖ್ಯಮಂತ್ರಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೆಗಾ ಸಂಭ್ರಮಾಚರಣೆಯ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜ್ಯ ಸರ್ಕಾರದ ವಕ್ತಾರರ ಪ್ರಕಾರ, ಯೋಗಿ ಅವರು ತಮ್ಮ ಎರಡನೇ ಅವಧಿಯ ಮೊದಲ ವರ್ಷವನ್ನು ಪೂರ್ಣಗೊಳಿಸಿದ ತಕ್ಷಣ, ಅವರು ಸತತ ಆರು ವರ್ಷ ಮತ್ತು ಆರು ದಿನಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಉಳಿದಿರುವ ದಾಖಲೆಯನ್ನು ಹೊಂದುತ್ತಾರೆ.