ಪಾಕಿಸ್ತಾನದಲ್ಲಿ ಉಂಟಾಗಿರುವ ಆರ್ಥಿಕ ದುಸ್ಥಿತಿ ಇದೀಗ ಪಾಕಿಸ್ತಾನದ ಸೇನೆಯನ್ನು ಬಾಧಿಸಲು ಆರಂಭಿಸಿದೆ. ಸೇನಾ ಕಮಾಂಡ್‌ಗಳಲ್ಲಿ ಆಹಾರದ ಕೊರತೆ ಉಂಟಾಗಿದ್ದು, ಹೆಚ್ಚಿನ ಅನುದಾನ ಒದಗಿಸುವಂತೆ ಹಲವು ಕಮಾಂಡ್‌ಗಳು ಸೇನಾ ಮುಖ್ಯಸ್ಥರಿಗೆ ಪತ್ರ ಬರೆದಿವೆ. ಈ ವಿಷಯವನ್ನು ಈಗಾಗಲೇ ಮುಖ್ಯ ಲಾಜಿಸ್ಟಿಕ್‌ಸ್ಟಾಫ್‌ಮತ್ತು ಸೇನಾ ಕಾರ್ಯಾಚರಣೆಗಳ ಮುಖ್ಯಸ್ಥರ ಗಮನಕ್ಕೆ ತರಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಹೆಚ್ಚಾಗುತ್ತಿರುವ ಹಣದುಬ್ಬರ ಹಾಗೂ ವಿಶೇಷ ಅನುದಾನಗಳನ್ನು ಕಡಿತಗೊಳಿಸಿರುವುದರಿಂದ ಪಾಕಿಸ್ತಾನದಲ್ಲಿ ಸೈನಿಕರಿಗೆ 2 ಹೊತ್ತು ಸರಿಯಾಗಿ ಊಟ ನೀಡಲು ಸಹ ಸಾಧ್ಯವಾಗುತ್ತಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.