ಬೆಂಗಳೂರು ರಸ್ತೆಗಳಲ್ಲಿನ ಗುಂಡಿಗಳಿಂದಾಗಿ ಜನಸಾಮಾನ್ಯರು ಜೀವ ಹೋಗುತ್ತಿದ್ದರು ನಿರ್ಲಕ್ಷ್ಯ ವಹಿಸಿರುವ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಆಮ್‌ಆದ್ಮಿ ಪಾರ್ಟಿ ನ.19ರಂದು ಪ್ರತಿಭಟನೆ ಹಮ್ಮಿಕೊಂಡಿದೆ. ಧರಣಿ ಬಳಿಕ ಮುಖಂಡರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.ವಿಶೇಷವೆಂದರೆ ಈ ಪ್ರತಿಭಟನೆಯಲ್ಲಿ ರಸ್ತೆಗುಂಡಿಗೆ ಪ್ರಾಣಬಿಟ್ಟವರ ಕುಟುಂಬದ ಕೆಲವು ಸದಸ್ಯರು ಭಾಗವಹಿಸಲಿದ್ದಾರೆ. ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಲಿದ್ದಾರೆ. ಬೆಂಗಳೂರು ನಗರ ಎಎಪಿ ಸಂಘಟನಾ ಕಾರ್ಯದರ್ಶಿ ಸುರೇಶ್‌ರಾಥೋಡ್‌ಮಾತನಾಡಿ, ರಸ್ತೆಗುಂಡಿಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಬೇಕಿತ್ತು. ಅದು ಆಗಿಲ್ಲ. ಕನಿಷ್ಠಪಕ್ಷ ರಸ್ತೆ ಗುಂಡಿಗಳಿಂದ ಗಾಯವಾದವರಿಗೆ, ಜೀವ ಬಿಟ್ಟವರ ಕುಟುಂಬದವರಿಗೆ ಪರಿಹಾರ ನೀಡಲೂ ಬಿಜೆಪಿ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದರು.