ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಅನಾಹುತಗಳ ಕುರಿತಂತೆ ಕೋರಮಂಗದಲ ವಿಜಯ್ ಮೆನನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಗುರುವಾರ ಸಿಜೆ ಪ್ರಸನ್ನ ಬಿ ವರಳೆ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಂದಿತುಆಗ ಅರ್ಜಿದಾರರ ಪರ ವಕೀಲರು, ರಸ್ತೆಗುಂಡಿಗಳಿಂದ ಸಾವನ್ನಪ್ಪುವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ರಸ್ತೆ ಗುಂಡಿ ಮುಚ್ಚಲು ಸಮರ್ಪಕ ತಂತ್ರಜ್ಞಾನ ಅಳವಡಿಸಿಕೊಂಡಿಲ್ಲ ಎಂದು ದೂರಿದರು. ಆಗ ಬಿಬಿಎಂಪಿ ವಕೀಲರು, ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್ ಗೆ ಬಿಬಿಎಂಪಿ ವಾದಮಂಡನೆಗೆ ಕಾಲಾವಕಾಶ ಕೋರಿದರು. ಹೈಕೋರ್ಟ್ ಆದೇಶ ಪಾಲಿಸಲು ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ. ಇದನ್ನು ಹೀಗೆಯೇ ಬಿಡಲು ಸಾಧ್ಯವಿಲ್ಲ, ಸಂಬಂಧಿಸಿದ ಅಧಿಕಾರಿಗಳ ಪ್ರಮಾಣಪತ್ರದೊಂದಿಗೆ ವರದಿ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಿತು.