ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ವಿಷಯಗಳು ಚರ್ಚೆಯಾಗಬೇಕು: ಹೆಚ್‌ಡಿಕೆ

ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ, ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ವಿಷಯಗಳು ಚರ್ಚೆ ಆಗಬೇಕು. ಈ ಭಾಗದ ಸಮಸ್ಯೆಗಳ ಪರಿಹಾರ ಹುಡುಕಲು ಸದನದ ಕಲಾಪ ನಡೆಯಬೇಕು.ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದೆ. ಇಂತಹ ಪರಿಸ್ಥಿತಿಯಲ್ಲಿ 8 ದಿನಗಳ ಕಾಲ ರಾಜ್ಯದ ಸಮಸ್ಯೆಗಳ ಬಗ್ಗೆ ಗುಣಾತ್ಮಕ ಚರ್ಚೆ ಆಗಬೇಕು. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಅಧಿವೇಶನಕ್ಕೆ ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರಿಗೆ ರಾಷ್ಟ್ರೀಯ ನಾಯಕರು ಅಲ್ಲಿ ಪ್ರಮುಖ ಜವಾಬ್ದಾರಿಯನ್ನು ನೀಡಿದ್ದಾರೆ. ಜನತೆಯ ಸಂಕಷ್ಟದಲ್ಲಿ ಭಾಗವಹಿಸುವುದಕ್ಕಿಂತ ಹೆಚ್ಚಿನ ಜವಾಬ್ದಾರಿ ಕೊಟ್ಟಿದ್ದಾರೆ. ಹೀಗಾಗಿ ಗೈರಾಗಿದ್ದಾರೆ ಎಂದು ಲೇವಡಿ ಮಾಡಿದರು. ಸಿಎಂ ಸಿದ್ದರಾಮಯ್ಯ ಮುಸ್ಲಿಂ ಓಲೈಕೆ ಮಾಡುತ್ತಿರುವ ವಿಚಾರದ ಕುರಿತು ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಭಾಷಣಗಳೇ ಒಲೈಕೆ ಮಾಡುವ ಭಾಷಣ. ಅದು ಅಭಿವೃದ್ಧಿ ಕಾರ್ಯಕ್ರಮದ ಭಾಷಣ ಅಲ್ಲ. ಒಲೈಕೆ ಭಾಷಣ. ಒಲೈಕೆ ಭಾಷಣದ ಮತ್ತೊಂದು ಸೀರೀಸ್ ರಿಪೀಟ್ ಮಾಡಿದ್ದಾರೆ ಎಂದರು.

Leave a Reply

Your email address will not be published. Required fields are marked *