ರಾಜ್ಯದಲ್ಲಿ 1 ಅನ್ನಭಾಗ್ಯ ಯೋಜನೆಯ ಚರ್ಚೆ ತಾರಕಕ್ಕೇರಿದ್ದು, ಸಿಟಿ ರವಿ ಮತ್ತು ಬಿಜೆಪಿ ನಾಯಕರಿಗೆ ಸಾಕ್ಷಿ ಸಮೇತ ಸಿದ್ದು ತಿರುಗೇಟು

ಜುಲೈ ತಿಂಗಳಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕೊಡುಲು ನಿರ್ಧರಿಸಿತ್ತು. ಈ ಬಗ್ಗೆ ಎಫ್‍ಸಿಐನೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ ಈಗ ಎಫ್‍ಸಿಐ ಅಕ್ಕಿಯನ್ನು ನೀಡಲು ನಿರಾಕರಿಸಿದೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದರು. ಈ ವಿಚಾರವಾಗಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಅಲ್ಲದೇ ಭಾರತೀಯ ಆಹಾರ ನಿಗಮ ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕರಾರು ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ ರವಿ ಸವಾಲು ಹಾಕಿದ್ದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ಸವಾಲಿಗೆ ಎಫ್‍ಸಿಐ ಪತ್ರ ಹಾಕಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿ.ಟಿ ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ. ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಬಿಜೆಪಿಗರು ಆಗ್ರಹಿಸಬೇಕು. ಅದನ್ನು ಬಿಟ್ಟು ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಟ್ವಿಟ್ಟರ್‌ನಲ್ಲಿ ಕಿಡಿಕಾರಿದ್ದಾರೆ. ಇಂತಹ ಸುಳ್ಳು ಬೇಜವಾಬ್ದಾರಿ ಹೇಳಿಕೆ, ಮತ್ತು ಅಪಪ್ರಚಾರದ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿದ್ದಾರೆ ಎಂದು ಟ್ವೀಟ್‍ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

Leave a Reply

Your email address will not be published. Required fields are marked *