ರಾಜ್ಯದಲ್ಲಿ 26 ಸಂಸದರು ಬಿಜೆಪಿಯವರಿದ್ದಾರೆ ಸುಮಲತಾ ಕೂಡ ಬಿಜೆಪಿ ಅಸೋಸಿಯೇಟ್‌ಮೆಂಬರ್ – ಡಿಕೆಶಿ

ಬಿಜೆಪಿಯವರದ್ದು ಸುಳ್ಳಿನ ಯುನಿವರ್ಸಿಟಿ. ರಾಜ್ಯದಲ್ಲಿ 26 ಸಂಸದರು ಬಿಜೆಪಿಯವರಿದ್ದಾರೆ. ಸುಮಲತಾ ಕೂಡ ಬಿಜೆಪಿ ಅಸೋಸಿಯೇಟ್ ಮೆಂಬರ್‌ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ವ್ಯಂಗ್ಯವಾಡಿದ್ದಾರೆ.ಮೂರು ವರ್ಷದಿಂದ ಮಹದಾಯಿ ಯೋಜನೆ ಜಾರಿಗೊಳಿಸಲು ಆಗಿಲ್ಲ. ಮೂರು ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆ. ಈಗ ನಾವು ಮತ್ತು ರೈತರು ಸೇರಿ ಹೋರಾಟ ಮಾಡಿ ಒಂದು ಹಂತಕ್ಕೆ ತಂದಿದ್ದೇವೆ. ಸುಪ್ರೀಂ ಕೋರ್ಟ್ ತೀರ್ಪಿಗೆ ಒಳಪಟ್ಟು, ಕಾಮಗಾರಿ ಆರಂಭಿಸಿ ಎಂದು ಪತ್ರ ಸಿದ್ಧಪಡಿಸಿದ್ದಾರೆ. ಗೋವಾ ಮಂತ್ರಿಯೊಬ್ಬ ರಾಜೀನಾಮೆ ಕೊಡ್ತಾರಂತೆ, ಕೊಡಲಿ ಬಿಡಿ. ರಾಜ್ಯದಲ್ಲಿ 26 ಸಂಸದರು ಬಿಜಪಿಯವರಿದ್ದಾರೆ. ಮಹದಾಯಿಗೆ ಇವರೆಲ್ಲ ಸೇರಿ ಪ್ರಧಾನಮಂತ್ರಿಗಳ ಬಳಿ ಒಮ್ಮೆಯೂ ಮಾತನಾಡಿಲ್ಲ. ನೀರು ಹರಿಸುವ ಮುನ್ನ ಕಾಮಗಾರಿಯಾದ್ರು ಪೂರ್ಣಗೊಳಿಸಬೇಕಿತ್ತು. ಪ್ರಹ್ಲಾದ್ ಜೋಶಿ ಎಷ್ಟೊಂದು ಅಪ್ಡೇಟ್ ಇದ್ದಾರೆ ಅನ್ನೋದು, ಪತ್ರ ಓದಲಿ ಗೊತ್ತಾಗುತ್ತೆ. ಕೇಂದ್ರ ಸರ್ಕಾರ ಅನುಮತಿ ನೀಡಿದ ಪತ್ರದಲ್ಲಿ ಕಂಡಿಷನ್ ಹಾಕಿದ್ದಾರೆ. ನಾವೆಲ್ಲ ಸತ್ತ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ಬರುತ್ತಾ? ನಮಗೆ ಅಧಿಕಾರನಾ, ಕೊಡ್ರಿ ಆರು ತಿಂಗಳಲ್ಲಿ ಆ ಯೋಜನೆಯನ್ನು ಬಡಿದುಹಾಕ್ತೀನಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *