ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲದ ಕಾರಣ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವೇ ಇಲ್ಲ: ಡಿಕೆಶಿ ಸ್ಪಷ್ಟನೆ; ಪ್ರಾಧಿಕಾರ ರಚನೆಗೆ ಸುಪ್ರೀಂ ಡೆಡ್‌ಲೈನ್‌!

ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲದ ಕಾರಣ ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಸ್ಥಿತಿಯಲ್ಲಿಲ್ಲ ನ್ಯಾಯಾಧಿಕರಣ ರಚನೆಗೆ ಸುಪ್ರೀಂ ಕೋರ್ಟ್‌ಜುಲೈ 5 ರ ನಿರ್ದೇಶನ ನೀಡಿದ್ದರೂ, ಸದ್ಯ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಜಲಸಂಪನ್ಮೂಲ ಸಚಿವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಹೇಳಿದ್ದಾರೆ.”ನಮ್ಮ ಕುಡಿಯುವ ಅಗತ್ಯಗಳನ್ನು ಪೂರೈಸಲು ನೀರಿಲ್ಲ. ಮುಂಗಾರು ವಿಳಂಬದಿಂದಾಗಿ ತೀವ್ರ ಕೊರತೆಯಿದೆ” ಎಂದು ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ನಂತರ ಹೇಳಿಕೆ ನೀಡಿದ್ದಾರೆ. ಅಲ್ಲದೆ, ನೀರು ಬಿಡುಗಡೆ ಮಾಡಲು ಬಯಸಿದರೂ ನಮಗೆ ನೀರಿಲ್ಲ, ಬೆಂಗಳೂರು ನಗರವೂ ಕಾವೇರಿ ನದಿಯ ಮೇಲೆ ಅವಲಂಬಿತವಾಗಿದೆ ಎಂದೂ ಹೇಳಿದ್ದಾರೆ.ಕರ್ನಾಟಕವು ಕೇಂದ್ರ ಮತ್ತು ವಿವಿಧ ರಾಜ್ಯಗಳ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆಯನ್ನು ಆಯೋಜಿಸಲಿದ್ದು, ಜುಲೈ 8 – 9 ರಂದು ಈ ಸಭೆ ನಡೆಯುವ ಸಾಧ್ಯತೆ ಇದೆ. ಈ ಸಭೆಗೆ ಮಂಡ್ಯದ ಕೆಆರ್‌ಎಸ್ ಡ್ಯಾಂ ಬಳಿ ಸ್ಥಳವನ್ನು ಹುಡುಕಲು ನಾನು ಅಧಿಕಾರಿಗಳನ್ನು ಕೇಳಿದ್ದೇನೆ. ಇದರಿಂದಾಗಿ ತಮಿಳುನಾಡು ಮತ್ತು ಕೇಂದ್ರ ಅಧಿಕಾರಿಗಳು ನೈಜ ಪರಿಸ್ಥಿತಿಯನ್ನು ನೋಡಬಹುದು ಎಂದೂ ಡಿಕೆಶಿ ಹೇಳಿದರು.

Leave a Reply

Your email address will not be published. Required fields are marked *