ರಾಜ್ಯದ ಬೆಳವಣಿಗೆಗೆ ಭದ್ರ ಬುನಾದಿ ಹಾಕಲಿದೆ ‘ಜಾಗತಿಕ ಹೂಡಿಕೆದಾರರ ಸಮಾವೇಶ-ಇನ್ವೆಸ್ಟ್ಕರ್ನಾಟಕ’: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ನಂತರ ಹಲವು ದೇಶಗಳು ಚೀನಾ ಹೊರತಾಗಿ ಬೇರೆ ದೇಶಗಳಲ್ಲಿ ವ್ಯಾಪಾರ-ವ್ಯವಹಾರ ಮಾಡಲು ಉತ್ಸುಕವಾಗಿವೆ. ಈ ಕಾರಣದಿಂದ ನಾವು ಧೈರ್ಯ ಮಾಡಿ ‘ಜಿಮ್’ ಸಮಾವೇಶ (ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ) ನಡೆಸಲು ತೀರ್ಮಾನಿಸಿದ್ದೇವೆ’ ಬುಧವಾರದಿಂದ ನಗರದ ಅರಮನೆ ಮೈದಾನದಲ್ಲಿ ಆರಂಭವಾಗುವ ಮೂರು ದಿನಗಳ ‘ಜಾಗತಿಕ ಹೂಡಿಕೆದಾರರ ಸಮಾವೇಶ-ಇನ್ವೆಸ್ಟ್ಕರ್ನಾಟಕ’ ಇಡೀ ಜಗತ್ತಿನ ಗಮನ ಸೆಳೆಯಲಿದೆ. ಜಾಗತಿಕ ಉದ್ದಿಮೆಗಳಿಗೆ ಬೆಂಗಳೂರೇ ಗಮ್ಯವಾಗಲಿದೆ. ಈ ಇನ್ವೆಸ್ಟ್ಕರ್ನಾಟಕ ಮುಂದಿನ ಐದು ವರ್ಷಗಳ ರಾಜ್ಯದ ಬೆಳವಣಿಗೆಗೆ ಭದ್ರ ಬುನಾದಿ ಹಾಕಲಿದೆ. ಈ ಸಮಾವೇಶ ಅತ್ಯಂತ ಯಶಸ್ವಿಯಾಗಲಿದೆ ಎಂದೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *