ರಾಜ್ಯದ ಸಕ್ಕರೆನಾಡು ಮಂಡ್ಯಕ್ಕೆ ಅಮೇರಿಕಾ ಮಾಜಿ ಅಧ್ಯಕ್ಷ ಬರಾಕ್‌ಒಬಾಮಾ ಆಗಮಿಸಲಿದ್ದಾರೆ

ರಾಜ್ಯದ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಜಾಗತಿಕ ದೊಡ್ಡಣ್ಣನೆಂದು ಕರೆಸಿಕೊಂಡಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್‌ಒಬಾಮಾ ಆಗಮಿಸಲಿದ್ದಾರೆ. ಮುಂಬರುವ 2024ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಆಗಮಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ವಧರ್ಮ ಸಮನ್ವಯ ಕೇಂದ್ರವನ್ನು (ಮದರ್ ಅರ್ಥ್ ಆಧ್ಯಾತ್ಮಿಕ ಕೇಂದ್ರ) ಮಂಡ್ಯದಲ್ಲಿ ಸ್ಥಾಪಿಸಲಾಗುತ್ತಿದ್ದು, ಇದಕ್ಕೆ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್‌ಒಬಾಮಾ ದಂಪತಿ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಇನ್ನು ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಜಗತ್ತಿನಲ್ಲಿ ಮೊಟ್ಟ ಮೊದಲನೆಯದಾಗಿ ನಿರ್ಮಾಣ ಮಾಡಲಾಗುತ್ತಿರುವ ಸರ್ವಧರ್ಮ ಸಮನ್ವಯ ಕೇಂದ್ರವೆಂದೂ ಕರೆಯಬಹುದು. ಇದು ಒಂದು ಧರ್ಮಕ್ಕೆ ಸೀಮತವಾಗದೇ ಎಲ್ಲಾ ಧರ್ಮದವೂ ಸಮಾನ ಎಂದು ಸಾರುವ ಸದುದ್ದೇಶದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಅಮೇರಿಕಾದ ಖ್ಯಾತ ಸರ್ಜನ್ ಜನರಲ್ ಡಾ.ವಿವೇಕ್ ಮೂರ್ತಿ ಹಾಗೂ ಅವರ ತಂದೆ ಡಾ.ಮೂರ್ತಿ ಜಂಟಿಯಾಗಿ ಮದರ್ ಅರ್ಥ್ ನಿರ್ಮಾಣ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *