ಜಿಲ್ಲಾ ಪ್ರವಾಸದಲ್ಲಿ ಇರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಸದ್ಯ ಹೊಸಪೇಟೆಯ ಕಮಲಾಪುರದಲ್ಲಿ ವಾಸ್ತವ್ಯ ಹೂಡಿದ್ದಾರೆ. ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಅವಾಂತರಕ್ಕೆ ಜನ, ಜಾನುವಾರುಗಳು ಸಂಕಷ್ಟಕ್ಕೆ ಸಂಬಂಧಿಸಿದಂತೆ ಕಮಲಾಪುರದ ಹೋಟೆಲ್‌ನಿಂದಲೇ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಕಾಧಿಕಾರಿಗಳು, ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ ಹಾಗೂ ಶಶಿಕಲಾ ಜೊಲ್ಲೆ, ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದರು.