ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರು ಫುಲ್‌ ಅಲರ್ಟ್‌ ಆಗಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿ ಅಕ್ರಮ ವಸ್ತುಗಳ ಸಾಗಾಟ ತಡೆಗೆ ಕ್ರಮ ವಹಿಸಿದ್ದಾರೆ. ಈ ವೇಳೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 15.78 ಕೋಟಿ ರೂ. ನಗದು, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನ ಜಪ್ತಿ ಮಾಡಲಾಗಿದೆ. ರಾಜ್ಯದಲ್ಲಿ ಈವರೆಗೆ 15.78 ಕೋಟಿ ರೂ. ನಗದು, 23 ಕೋಟಿ ರೂ. ಮೌಲ್ಯದ ಮದ್ಯ, 65 ಲಕ್ಷ ರೂ. ಮೌಲ್ಯದ ಡ್ರಗ್ಸ್, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿಯಾಗಿದೆ

Leave a Reply

Your email address will not be published. Required fields are marked *