ಮಾಜಿ ಸಿಎಂ ಜಗದಿಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಲೇ ತಮಗೆ ಟಿಕೆಟ್ ಕೈತಪ್ಪಲು ಬಿಎಲ್ ಸಂತೋಷ್ ಕಾರಣ ಎಂದು ಆರೋಪ ಹೊರಿಸಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕರುಗಳು ಒಬ್ಬೊಬ್ಬರಂತೆ ಸಂತೋಷ್ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಲಿಂಗಾಯತ ನಾಯಕರುಗಳನ್ನು ಬಿಜೆಪಿ ಕಡೆಗಣಿಸಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ಲಿಂಗಾಯತ ನಾಯಕ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ತೆರಳಿ ಯಡಿಯೂರಪ್ಪರನ್ನು ಭೇಟಿ ಮಾಡಿರುವುದು ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.