ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೃಹತ್ ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯಗಳ ಸಚಿವ ಎಂ.ಬಿ ಪಾಟೀಲ್ ಅವರು, ರಾಜ್ಯದಲ್ಲಿ ವಿಮಾನ ನಿಲ್ದಾಣಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ನಿರ್ಮಾಣ ಮಾಡಲಾಗುತ್ತದೆ. ಆದರೆ ನಿರ್ವಹಣೆಯನ್ನು ಕೇಂದ್ರ ಸರ್ಕಾರ ನೋಡಿಕೊಳ್ಳುತ್ತೆ. ಇದರಿಂದ ರಾಜ್ಯ ಸರ್ಕಾರಕ್ಕೆ ನಷ್ಟ ಆಗುತ್ತಿದೆ. ಇದರಿಂದಾಗಿ ಎರ್‌ಪೋರ್ಟ್‌ಗಳ ನಿರ್ವಹಣೆಯನ್ನು ರಾಜ್ಯವೇ ಮಾಡಿದರೆ ಸರ್ಕಾರಕ್ಕೆ ಲಾಭ ಆಗಲಿದೆ. ಈ ನಿಟ್ಟಿನಲ್ಲಿ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ. ಮಹಾರಾಷ್ಟ್ರ ಸೇರಿದಂತೆ 2-3 ರಾಜ್ಯಗಳು ರಾಜ್ಯಗಳ ವಿಮಾನ ನಿಲ್ದಾಣಗಳನ್ನು ಅಲ್ಲಿನ ಸರ್ಕಾರವೇ ನಿರ್ವಹಣೆ ಮಾಡುತ್ತಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಆದಾಯ ಬರುತ್ತಿದೆ. ಇದೇ ಮಾದರಿಯನ್ನು ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.