ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಕರಡು ಮೀಸಲಾತಿಯ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಒಬಿಸಿ, ಎಸ್ಸಿ/ಎಸ್ಟಿಗಳಿಗೆ ಶೇ. 50 ಮೀಸಲಾತಿ ನಿಗದಿ ಮಾಡಲಾಗಿದೆ. ಅದೇ ರೀತಿ ಮಹಿಳೆಯರಿಗೆ ಶೇ. 50 ವಾರ್ಡ್‌ಗಳನ್ನು ಮೀಸಲಿರಿಸಲಾಗಿದೆ. ಮೀಸಲಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 11 ದಿನಗಳ ಕಾಲಾವಕಾಶ ನೀಡಲಾಗಿತ್ತು. ಈ ವೇಳೆ 2000ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು. ನಗರಾಭಿವೃದ್ದಿ ಇಲಾಖೆ ಅಂತಿಮಗೊಳಿಸಿದ್ದ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆಯ ಆತಂಕವನ್ನು ದೂರಮಾಡಿದೆ. ನ್ಯಾಯಾಲಯಗಳು ಮಧ್ಯ ಪ್ರವೇಶವನ್ನು ಮಾಡದಿದ್ದರೆ ಚುನಾವಣಾ ಆಯೋಗ ಶೀಘ್ರದಲ್ಲಿಯೇ ಬಿಬಿಎಂಪಿ ಚುನಾವಣೆಗೆ ಮುಹೂರ್ತವನ್ನು ನಿಗದಿ ಮಾಡಲಿದೆ.