ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್ ವಿಂಗಡನೆ ಅಧಿಸೂಚನೆ ಕುರಿತ ಅರ್ಜಿಗಳ ಸಂಬಂಧ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ, ಶಾಸಕ ಎಂ.ಸತೀಶ್ ರೆಡ್ಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಅಂಗೀಕರಿಸಿದೆ. ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ಚುನಾವಣೆ ಆಯೋಗಕ್ಕೆ ನೋಟಿಸ್ ನೀಡಿದೆ. ಬುಧವಾರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠವು ರೀಟ್ ಅರ್ಜಿಗಳನ್ನು ಅಂಗೀಕರಿಸಿತು. ನಂತರ ರಾಜ್ಯ ಸರ್ಕಾರ, ಬಿಬಿಎಂಪಿ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಈ ಸಂಬಂಧ ನೋಟಿಸ್ ನೀಡಿದೆ.