ಸುವರ್ಣಸೌಧದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಸುದ್ದಿಗಾರರೊಂದಿಗೆ ಮಾತನಾಡಿ,ರಾಮನ ಅಭಿವೃದ್ಧಿ ಇಲ್ಲಿಯೂ ಮಾಡಬೇಕು. ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನಿಸಿದ್ದೇವೆ. ಅಭಿವೃದ್ಧಿಗೆ ಬರುವಂತ ಬಜೆಟ್ ನಲ್ಲಿ ಸಿಎಂ ಹಣ ಘೋಷಣೆ ಮಾಡುತ್ತಾರೆ. ಆ ಮೂಲಕ ರಾಮನಗರದ ರಾಮದೇವರ ಬೆಟ್ಟವನ್ನು ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡುತ್ತೇವೆ ಎಂದರು.