ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ಸ್ಥಾಪನೆಗೆ ಕೇಂದ್ರ ಸರ್ಕಾರ ನಿಶಾನೆ ತೋರಿದ ಬಳಿಕ ಧಾರವಾಡ ಜಿಲ್ಲೆಯಲ್ಲಿ 200 ಎಕರೆ ಪ್ರದೇಶ ಜಾಗ ನಿಗದಿಗೊಳಿಸಲಾಗಿದೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ರಾಯಚೂರಿಗೆ ಏಮ್ಸ್‌ಬರಲಿದೆ ಎಂಬ ಹೇಳಿಕೆ ಬಾರಿ ಸಂಚಲನ ಸೃಷ್ಟಿಸಿದೆ. ಹುಬ್ಬಳ್ಳಿ-ಧಾರವಾಡದಿಂದ ಏಮ್ಸ್ ಸ್ಥಳ ಬದಲಾವಣೆ ತೆರೆಮರೆಯಲ್ಲಿ ನಡೆಯುತ್ತಿವೆ ಎಂಬ ಸಂಶಯ ಎಲ್ಲರಲ್ಲೂ ಮೂಡಿದೆ. ಇದರಿಂದ ಅವಳಿ ನಗರದ ಜನರಲ್ಲಿ ಅಸಮಾಧಾನ ಉಂಟಾಗಿದ್ದು, ಏಮ್ಸ್‌ಗಾಗಿ ಉಗ್ರ ಹೋರಾಟಕ್ಕೆ ಹುಬ್ಬಳ್ಳಿ ಧಾರವಾಡ ಜನರು ಸಜ್ಜಾಗುತ್ತಿದ್ದಾರೆ.