ರಾಹುಲ್ ಗಾಂಧಿಗೆ ನೋಟಿಸ್ ನೀಡಲು 3 ಗಂಟೆಗಳ ಕಾಲ ಕಾದ ಪೊಲೀಸರು

ಶ್ರೀನಗರದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ಕಿರುಕುಳದ ಸಂತ್ರಸ್ತರ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ನಿಮ್ಮನ್ನು ಸಂಪರ್ಕಿಸಿದ ಸಂತ್ರಸ್ತರ ಬಗ್ಗೆ ಮಾಹಿತಿ ನೀಡಿ, ನಾವು ಅವರಿಗೆ ಭದ್ರತೆಯನ್ನು ನೀಡುತ್ತೇವೆ ಎನ್ನುವ ನೋಟಿಸ್ ನೀಡಲು 3 ಗಂಟೆಗಳ ಕಾಲ ಕಾಯುವ ಪರಿಸ್ಥಿತಿ ನಿರ್ಮಾಣವಾಯಿತು. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ.ಇದಾದ ಬಳಿಕ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ರಾಹುಲ್ ಗಾಂಧಿ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ನೋಟಿಸ್ ನೀಡಿದ್ದರು. ಆ ವೇಳೆಯೂ ಒಂದೂವರೆ ಗಂಟೆಗಳ ನಂತರ ಸ್ವತಃ ರಾಹುಲ್ ಗಾಂಧಿ ಅವರೇ ನೋಟಿಸ್ ಅನ್ನು ಪಡೆದರು.

Leave a Reply

Your email address will not be published. Required fields are marked *