ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಎಸ್.ಎಂ.ಕೃಷ್ಣ ಅವರನ್ನ ಅಭಿನಂದಿಸಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಐ.ಟಿ, ಬಿಟಿ ಕೈಗಾರಿಕೆಗಳು ದೊಡ್ಡ ಪ್ರಮಾಣದಲ್ಲಿ ಬೆಂಗಳೂರಿನಲ್ಲಿ ಬೆಂಬಲ ನೀಡಿ ಬೆಳೆಸಿದ್ದಾರೆ. ಅವರ ಕಾಲದಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದಿದ್ದು, ನಾವು ಯಾರೂ ಮರೆಯಲು ಸಾಧ್ಯವಿಲ್ಲ ಎಸ್.ಎಂ ಕೃಷ್ಣ ಅವರು. ಎಲ್ಲ ರಂಗದಲ್ಲೂ ಕೂಡ ಉತ್ತಮ ಆಡಳಿತ, ಉತ್ತಮ ಕಾರ್ಯಕ್ರಮ, ಜನಪರ, ನಾಡಿನ ಪರ ಗಟ್ಟಿಯಾದ ನಿಲುವು , ಇದೆಲ್ಲ ಸಮ್ಮಿಳಿತಗೊಂಡಿರುವುದು ಎಸ್ ಎಂ ಕೃಷ್ಣ ಅವರಲ್ಲಿ ಮಾತ್ರ. ಇವರನ್ನು ಗುರುತಿಸಿ ಪ್ರಧಾನಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿರುವುದು ಅವರೊಬ್ಬ ಮುತ್ಸದ್ದಿ ರಾಜಕಾರಣಿ ಎಂದು ತೋರಿಸುತ್ತದೆ. ರೈತಪರ ಹೋರಾಟ, ಜ್ಞಾನಾಧಾರಿತ ಅಭಿವೃದ್ಧಿಗೆ ಎಸ್.ಎಂ.ಕೃಷ್ಣ ಅವರು ದೊಡ್ಡ ಕಾಣಿಕೆ ನೀಡಿದ್ದಾರೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.