ವಯನಾಡ್ ಸಂಸದ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದಕ್ಕೆ,ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು,”ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಲು ಎಲ್ಲಾ ದಾರಿಗಳನ್ನು ಬಳಸಿಕೊಂಡಿದೆ. ಸತ್ಯವನ್ನು ಹೇಳುವವರು ಬಿಜೆಪಿಗೆ ಬೇಕಾಗಿಲ್ಲ. ಪ್ರಜಾಪ್ರಭುತ್ವ ಉಳಿಸಲು ನಾವು ಜೈಲಿಗೆ ಹೋಗಲೂ ಸಿದ್ದ”ಎಂದು ಖರ್ಗೆ ಹೇಳಿದ್ದಾರೆ.
2019ರ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ‘ಎಲ್ಲಾ ಕಳ್ಲರಿಗೂ ಮೋದಿ ಎನ್ನುವ ಉಪನಾಮ ಏಕಿದೆ’ ಎಂದು ರಾಹುಲ್ ಗಾಂಧಿ ಎರಡು ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಗೆ ಸೂರತ್ ನ್ಯಾಯಾಲಯ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು.