ದೆಹಲಿ – ಉನಾ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಸರಣಿಯ 4ನೇ ಸೆಮಿ ಹೈಸ್ಪೀಡ್ ರೈಲಿಗೆ ಪ್ರಧಾನಿ ಮೋದಿ ಹಿಮಾಚಲ ಪ್ರದೇಶದಲ್ಲಿ ಚಾಲನೆ ನೀಡಿದ್ದಾರೆ. ಇದರೊಂದಿಗೆ ನವೆಂಬರ್ 10 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್5ನೇ ರೈಲು ಚಾಲನೆಗೊಳ್ಳಲಿದೆ. ಇದು ಬುಧವಾರ ಹೊರತುಪಡಿಸಿ ವಾರದ ಉಳಿದೆಲ್ಲ ದಿನಗಳಲ್ಲೂ ಸಂಚರಿಸಲಿದೆ. ಮೊದಲ ಮೂರು ರೈಲಿಗಿಂತಲೂ ಗುಣಮಟ್ಟದ್ದಾಗಿದ್ದು, ಉನಾದಿಂದ ದೆಹಲಿಯ ನಡುವೆ 2 ಗಂಟೆ ಪ್ರಯಾಣದ ಸಮಯವನ್ನು ಕಡಿಮೆಗೊಳಿಸಲಿದೆ. ಕರ್ನಾಟಕಕ್ಕೂ ವಂದೇ ಭಾರತ್ ರೈಲು ಬರಲಿದ್ದು, ಮುಂದಿನ ನವೆಂಬರ್ ತಿಂಗಳಿನಿಂದ ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಸಂಚರಿಸಲಿದೆ.