ಕೋಯಿಕ್ಕೋಡ್ ಮೂಲದ ಸುರೇಂದ್ರನ್, ಈ ಹಿಂದೆ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪತ್ತನಂತಿಟ್ಟದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಾಂಗ್ರೆಸ್ ಮತ್ತು ಎಡ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದ ಇವರು ಮೂರನೇ ಸ್ಥಾನ ಪಡೆದರು. ಸುರೇಂದ್ರನ್ ಅವರು 2016 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2019 ರಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಸ್ಪರ್ಧಿಸಿ ಸೋತಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇರಳದ ಬಿಜೆಪಿ ಮುಖ್ಯಸ್ಥ ಕೆ ಸುರೇಂದ್ರನ್ ಕಣಕ್ಕಿಳಿಯಲಿದ್ದಾರೆ. 2009 ರಿಂದ ಸಾಂಪ್ರದಾಯಿಕವಾಗಿ ಕಾಂಗ್ರೆಸ್ ಭದ್ರಕೋಟೆಯಾಗಿದೆ ವಯನಾಡ್. 2019 ರಲ್ಲಿ ರಾಹುಲ್ ಗಾಂಧಿ ಅಮೇಠಿಯಲ್ಲಿ ಮತ್ತು ವಯನಾಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಸೋತಿದ್ದರೂ, ವಯನಾಡಿನಲ್ಲಿ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಸುರೇಂದ್ರನ್, ಕೇರಳದ ರಾಜಕೀಯ ಕ್ಷೇತ್ರದಲ್ಲಿ ಪ್ರಬಲವಾದ ಕಾಂಗ್ರೆಸ್-ಎಡ ಮೈತ್ರಿಗೆ ಸವಾಲೆಸೆಯುವ ಕೆಲಸವನ್ನು ಮಾಡುತ್ತಲೇ ಇರುತ್ತಾರೆ. ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದರೂ, ದಕ್ಷಿಣ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳು ತೀವ್ರ ಪ್ರತಿಸ್ಪರ್ಧಿಗಳಾಗಿ ಉಳಿದಿವೆ. ಕೋಯಿಕ್ಕೋಡ್ ಮೂಲದ ಸುರೇಂದ್ರನ್, ಈ ಹಿಂದೆ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಪತ್ತನಂತಿಟ್ಟದಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಕಾಂಗ್ರೆಸ್ ಮತ್ತು ಎಡ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದ ಇವರು ಮೂರನೇ ಸ್ಥಾನ ಪಡೆದರು. ಸುರೇಂದ್ರನ್ ಅವರು 2016 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು 2019 ರಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಸ್ಪರ್ಧಿಸಿ ಸೋತಿದ್ದಾರೆ. 2020 ರಲ್ಲಿ ಬಿಜೆಪಿ ಕೇರಳ ಘಟಕದ ಮುಖ್ಯಸ್ಥರಾಗಿ ನೇಮಕಗೊಂಡ ಸುರೇಂದ್ರನ್ ಅವರು ಶಬರಿಮಲೆ ದೇವಸ್ಥಾನಕ್ಕೆ ಯುವತಿಯರ ಪ್ರವೇಶದ ವಿರುದ್ಧ ಪ್ರತಿಭಟನೆಗಳನ್ನು ಮುನ್ನಡೆಸಿ ಮುನ್ನಲೆಗೆ ಬಂದಿದ್ದರು.