ವರ್ಷಾಂತ್ಯದ ಒಳಗೆ ಬಿಬಿಎಂಪಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಚುನಾವಣೆಗೆ ಎಲ್ಲರೂ ಸಿದ್ಧರಾಗಿರಬೇಕು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು

ಈಗಾಗಲೇ ಹಲವು ತಿಂಗಳುಗಳಿಂದ ಬಿಬಿಎಂಪಿ ಚುನಾವಣೆ ಸಂಬಂಧಿಸಿದಂತೆ ಕಾನೂನು ತೊಡಕುಗಳು ಎದುರಾಗಿದ್ದು ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಕಾನೂನು ತೊಡಕನ್ನು ನಿವಾರಿಸಲು ಕ್ರಮ ಕೈಗೊಳ್ಳುತ್ತೇವೆ ಈ ವರ್ಷದ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಚುನಾವಣೆಗೆ ಎಲ್ಲರೂ ಸಿದ್ಧರಾಗಿರಬೇಕು ಗೃಹ ಕಚೇರಿ ಕೃಷ್ಣದಲ್ಲಿ ತಮ್ಮನ್ನು ಭೇಟಿಯಾದ ಬಿಬಿಎಂಪಿ ಮಾಜಿ ಮೇಯರ್‌, ಆಡಳಿತ ಪಕ್ಷದ ಮಾಜಿ ನಾಯಕರು ಹಾಗೂ ಸದಸ್ಯರೊಂದಿಗೆ ಚರ್ಚಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಮಾಜಿ ಸದಸ್ಯರಿಗೆ ಸೂಚಿಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿರುವ ವಾರ್ಡ್‌ಮರುವಿಂಗಡಣೆ ಸಮರ್ಪಕವಾಗಿಲ್ಲ. 198 ವಾರ್ಡ್‌ಗಳನ್ನು ಮರುವಿಂಗಡಿಸಿ 243 ವಾರ್ಡ್‌ಗಳನ್ನಾಗಿ ಮಾಡಲಾಗಿದೆ. ಆದರೆ, ಈ ವೇಳೆ ಕಾಂಗ್ರೆಸ್‌ಶಾಸಕರಿರುವ ಕ್ಷೇತ್ರಗಳ ವಾರ್ಡ್‌ಗಳನ್ನು ಕಡಿಮೆ ಮಾಡಿ, ಬಿಜೆಪಿ ಶಾಸಕರ ಕ್ಷೇತ್ರ ವ್ಯಾಪ್ತಿಯಲ್ಲಿನ ವಾರ್ಡ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಸದ್ಯ ಇರುವ 243 ವಾರ್ಡ್‌ಗಳಂತೆಯೇ ಚುನಾವಣೆ ನಡೆದರೆ ಕಾಂಗ್ರೆಸ್‌ಪಕ್ಷಕ್ಕೆ ಅನಾನುಕೂಲವಾಗಲಿದೆ. ಹೀಗಾಗಿ 243 ವಾರ್ಡ್‌ಗಳ ಗಡಿಯಲ್ಲಿ ಬದಲಾವಣೆ ಮಾಡಬೇಕು ಅಥವಾ ಹಿಂದಿದ್ದಂತೆ 198 ವಾರ್ಡ್‌ಗಳನ್ನು ಮರುಸ್ಥಾಪಿಸಿ ಚುನಾವಣೆ ನಡೆಸಬೇಕು ಎಂದು ಮಾಜಿ ಸದಸ್ಯರೊಬ್ಬರು ಸಭೆಯಲ್ಲಿ ಮನವಿ ಮಾಡಿದ್ದಾರೆ . ಇನ್ನೂ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಬಿಎಂಪಿ ಚುನಾವಣೆ ವಿಚಾರ ಸುಪ್ರೀಂಕೋರ್ಚ್‌ನಲ್ಲಿದೆ. ಹೀಗಿರುವಾಗ ವಾರ್ಡ್‌ಮರುವಿಂಗಡಣೆ ಸೇರಿ ಇನ್ನಿತರ ವಿಚಾರಗಳನ್ನು ಮುಂದಿಟ್ಟುಕೊಂಡು ಹೋದರೆ ಚುನಾವಣೆ ಮುಂದೂಡಬೇಕಾಗುತ್ತದೆ. ಆಗ ಸುಪ್ರೀಂಕೊರ್ಚ್‌ನಲ್ಲಿ ಸರ್ಕಾರ ಉತ್ತರಿಸಲು ಕಷ್ಟವಾಗುತ್ತದೆ.

Leave a Reply

Your email address will not be published. Required fields are marked *