ವಾರಣಾಸಿ; ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ!

ಲೋಕಸಭೆ ಚುನಾವಣೆ 2024ಕ್ಕೆ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಎದುರಾಳಿ ಯಾರು? ಎಂಬುದು ಬಹಿರಂಗವಾಗಿದೆ. ಶನಿವಾರ ಅಭ್ಯರ್ಥಿಗಳ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ವಾರಣಾಸಿ ಕ್ಷೇತ್ರಕ್ಕೆ ಅಜಯ್ ರಾಯ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿ ಮೊದಲ ಪಟ್ಟಿಯಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಕಣಕ್ಕಿಳಿಯಲಿದ್ದಾರೆ ಎಂದು ಘೋಷಣೆ ಮಾಡಿತ್ತು. 54 ವರ್ಷದ ಅಜಯ್ ರಾಯ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ. ಈಗಾಗಲೇ 2014, 2019ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದು ಸೋತಿದ್ದ ಅಜಯ್ ರಾಯ್ 2024ರ ಚುನಾವಣೆಯಲ್ಲಿಯೂ ಮೋದಿ ಎದುರಾಳಿಯಾಗಿದ್ದಾರೆ.


Leave a Reply

Your email address will not be published. Required fields are marked *