ವಿದೇಶ ಪ್ರವಾಸ ಮುಗಿಸಿ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದರು. ಹಿರಿಯ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಅವರು ಮಣಿಪುರ ದ ಪರಿಸ್ಥಿತಿ ಸೇರಿದಂತೆ ಪ್ರಮುಖ ವಿದ್ಯಮಾನಗಳ ಮಾಹಿತಿ ಪಡೆದುಕೊಂಡರು,ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಗರಾಭಿವೃದ್ಧಿ ಸಚಿವ ಹರ್ದೀಪ್ ಪುರಿ, ಪ್ರಧಾನಮಂತ್ರಿ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ಶನಿವಾರ ಗೃಹ ಸಚಿವ ಅಮಿತ್ ಶಾ ಮಣಿಪುರದ ಪರಿಸ್ಥಿತಿ ಕುರಿತು ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೂರು ಗಂಟೆಗಳ ಸುದೀರ್ಘ ಸಭೆಯಲ್ಲಿ 18 ರಾಜಕೀಯ ಪಕ್ಷಗಳು, ಈಶಾನ್ಯದ ನಾಲ್ಕು ಸಂಸದರು ಮತ್ತು ಪ್ರದೇಶದ ಇಬ್ಬರು ಮುಖ್ಯಮಂತ್ರಿಗಳು ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ದಿನದಿಂದ ಮಣಿಪುರದ ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿದ್ದಾರೆ ಮತ್ತು ಸಮಸ್ಯೆಯನ್ನು ಪರಿಹರಿಸಲು ಸೂಕ್ಷ್ಮ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವರು ಸರ್ವಪಕ್ಷ ಸಭೆಗೆ ತಿಳಿಸಿದ್ದರು.