75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಬಿಬಿಎಂಪಿ ಹೊಸ ಯೋಜನೆಯೊಂದನ್ನು ರೂಪಿಸಿದೆ. ಬಡ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೋ, ಬಿಬಿಎಂಪಿ ಶಾಲೆಗಳಿಗೋ ದಾಖಲಾತಿಯನ್ನು ಮಾಡುತ್ತಾರೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಶಾಲೆಗಳ ಪ್ರಯತ್ನವನ್ನು ಮಾಡಿದರು ಕೆಲವು ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿರುತ್ತಾರೆ. ಫಲಿತಾಂಶವನ್ನು ಉತ್ತಮ ಪಡಿಸುವ ಸಲುವಾಗಿ ಬಿಬಿಎಂಪಿ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ವಿಶೇಷವಾಗಿ ಟ್ಯೂಷನ್ ತೆಗೆದುಕೊಂಡು ಮಕ್ಕಳಿಗೆ ಅನುಕೂಲ ಮಾಡಿಕೊಡಲಿದೆ.