ವಿದ್ಯುತ್‌ದರ ಏರಿಕೆಯಾಗಿದ್ದನ್ನು ನಾವು ಕಡಿಮೆ ಮಾಡಲು ಸಾಧ್ಯವಿಲ್ಲ ಕೆಇಆರ್‌ಸಿನವರು ಒಂದು ಬಾರಿ ಏರಿಕೆ ಮಾಡಿದರೆ ಅದನ್ನು ನಾವು ಹಿಂಪಡೆಯಲು ಆಗಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟನೆ

ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಕಾಂಗ್ರೆಸ್‌ಸರ್ಕಾರ ಬಂದ ತಕ್ಷಣ ವಿದ್ಯುತ್‌ಬೆಲೆ ಏರಿಕೆ ಮಾಡಿಲ್ಲ. ಮೇ 12ರಂದು ದರ ಏರಿಕೆ ಮಾಡಲಾಗಿದೆ. ಆಗ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮೇ 20ಕ್ಕೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ವಿದ್ಯುತ್‌ಬೆಲೆ ಏರಿಕೆಯಾಗಿದೆ. ಬೆಲೆ ಏರಿಕೆ ಮಾಡುವ ಪ್ರಕ್ರಿಯೆ 2022ರ ನವೆಂಬರ್‌ತಿಂಗಳಿನಿಂದಲೇ ನಡೆದಿದ್ದು, ಮಾಚ್‌ರ್‍ನಲ್ಲಿ ಏರಿಕೆ ಆಗಬೇಕಿತ್ತು. ಆದರೆ, ಆಗ ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಏರಿಕೆ ಮಾಡಿರಲಿಲ್ಲ. ಈಗ ನಮ್ಮ ಸರ್ಕಾರ ಬಂದ ನಂತರ 200 ಯೂನಿಟ್‌ವಿದ್ಯುತ್‌ನ್ನು ಗೃಹಬಳಕೆಗೆ ಉಚಿತವಾಗಿ ನೀಡುತ್ತಿದೆ. ಇದರಿಂದಾಗಿ ಗೃಹ ಬಳಕೆದಾರರಿಗೆ ಯಾವುದೇ ತೊಂದರೆಯಿಲ್ಲ. ಗೃಹ ಬಳಕೆದಾರರು ಈ ಹಿಂದೆ ಇದ್ದ ವಿದ್ಯುತ್‌ಬಾಕಿಯನ್ನು ಮಾತ್ರ ಪಾವತಿಸಬೇಕಿದೆ. ಕೆಇಆರ್‌ಸಿ ಕೇಂದ್ರ ಕಾಯ್ದೆಯಡಿ ವಿದ್ಯುತ್‌ದರ ಏರಿಕೆಯಾಗಿದ್ದು, ಇದರಡಿ ದರ ಏರಿಕೆಯಾಗಿದ್ದನ್ನು ನಾವು ಕಡಿಮೆ ಮಾಡಲು ಸಾಧ್ಯವಿಲ್ಲ. ಕೆಇಆರ್‌ಸಿನವರು ಒಂದು ಬಾರಿ ಏರಿಕೆ ಮಾಡಿದರೆ ಅದನ್ನು ನಾವು ಹಿಂಪಡೆಯಲು ಆಗಲ್ಲ. ಅದಕ್ಕೆ ನಾವು ಬದ್ಧರಾಗಿ ಇರಬೇಕಿದೆ. ಎಂದರು.

Leave a Reply

Your email address will not be published. Required fields are marked *