ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನಸಭೆ ಸ್ಪೀಕರ್‌ಯು.ಟಿ. ಖಾದರ್‌ಅವರು, ಜು.3ರಂದು ರಾಜ್ಯಪಾಲ ಥಾವರ್‌ಚಂದ್‌ಗೆಹಲೋತ್‌ಅವರ ಭಾಷಣ ಹಾಗೂ ಜು.7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಜೆಟ್‌ಮಂಡನೆಯಾಗಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದ ಮುಂದುವರೆದ ಭಾಗವಾಗಿ ಜು.3 ರಂದು ಬಜೆಟ್‌ಅಧಿವೇಶನ ಶುರುವಾಗಲಿದೆ. ಒಟ್ಟು 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಮೊದಲ ದಿನ ರಾಜ್ಯಪಾಲರ ಭಾಷಣ ನಡೆಯಲಿದೆ. ಬಳಿಕ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಬಳಿಕ ಜು.7 ರಂದು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಬಜೆಟ್‌ಮಂಡನೆ ಮಾಡಲಿದ್ದಾರೆ. ಬಜೆಟ್‌ಮೇಲಿನ ಸಾಮಾನ್ಯ ಚರ್ಚೆ ಬಳಿಕ ಅನುದಾನದ ಬೇಡಿಕೆಗಳನ್ನು ಅಂಗೀಕರಿಸಲಾಗುವುದು ಎಂದು ಮಾಹಿತಿ ನೀಡಿದರು.