ವಿಧಾನಸಭಾ ಚುನಾವಣೆಯಲ್ಲಿ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಬೇಕೆಂದು ನಾಳೆ ಮಂಡ್ಯಗೆ ಅಮಿತ್ ಶಾ- ಹಳೆ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಬೇಕೆಂದು ಬಿಜೆಪಿ ಶಪಥ ಮಾಡಿದ್ದು ಮಂಡ್ಯ ಜಿಲ್ಲೆ ಸೇರಿದಂತೆ ಹಳೆ ಮೈಸೂರು ಭಾಗದ ಹಲವು ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕೆಂದರೆ ಬಿಜೆಪಿ ಹಲವು ಮಾಸ್ಟರ್ ಪ್ಲ್ಯಾನ್ ಮಾಡುವುದು ಅನಿವಾರ್ಯ ಆಗಿದೆ. ಇದೀಗ ಆ ಮಾಸ್ಟರ್ ಪ್ಲಾನ್ ಮಾಡಲು ಬಿಜೆಪಿಯ ಚಾಣಕ್ಯ ಎಂದು ಬಿರುದು ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಖಾಡಕ್ಕೆ ಧುಮಿಕಿದ್ದಾರೆ. ನಾಳೆ ಮಂಡ್ಯದಲ್ಲಿ ಅಮಿತ್ ಶಾ ಅವರನ್ನು ಕರೆಸಿ ಬಿಜೆಪಿ ಬೃಹತ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.ನಾಳೆ ಮಂಡ್ಯ ನಗರಕ್ಕೆ ಕೇಂದ್ರ ಗೃಹ ಸಚಿವ ಆಗಮಿಸಲಿದ್ದು, ಬೆಳಗ್ಗೆ 11 ಗಂಟೆಗೆ ಮದ್ದೂರಿನ ಭೈರಾಪಟ್ಟಣದ ಹೆಲಿಪ್ಯಾಡ್‌ಗೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಬಳಿಕ 11.15ಕ್ಕೆ ಗೆಜ್ಜಲಗೆರೆಯಲ್ಲಿರುವ ಮನ್‌ಮುನ್‌ನ ಮೆಗಾ ಡೈರಿಯನ್ನು ಉದ್ಘಾಟಿಸಿ ಬಳಿಕ ಅಲ್ಲೇ ಊಟ ಮಾಡಲಿದ್ದಾರೆ. ಇದಾದ ಬಳಿಕ ಮತ್ತೆ ಭೈರಾಪಟ್ಟಣದ ಹೆಲಿಪ್ಯಾಡ್‌ನಿಂದ ಮಂಡ್ಯ ನಗರದ ಪಿಇಎಸ್ ಕಾಲೇಜಿನ ಹೆಲಿಪ್ಯಾಡ್‌ಗೆ ಹೆಲಿಕಾಪ್ಟರ್ ಮೂಲಕ‌ಆಗಮಿಸಿ 1.30ಕ್ಕೆ ಮಂಡ್ಯ ವಿವಿ ಆವರಣದಲ್ಲಿ ನಡೆಯುವ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಂಪುಟದ ಹಲವು ಸಚಿವರು ಭಾಗಿಯಾಗಲಿದ್ದಾರೆ.elated Articles

Leave a Reply

Your email address will not be published. Required fields are marked *