ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಯಾವುದೇ ಕ್ಷೇತ್ರ ಇಲ್ಲ, ಇನ್ನು ಕೂಡಾ ಕ್ಷೇತ್ರಕ್ಕಾಗಿ ಹುಡುಕಾಟ ಮಾಡುತ್ತಿರುವುದಾಗಿ ವ್ಯಂಗ್ಯ ಮಾಡುತ್ತಿದ್ದಾರೆ. ಆದರೆ ನನಗೆ ವರುಣಾ ಕ್ಷೇತ್ರದಲ್ಲಿ ಬೇಡಿಕೆ ಇದ್ದರೂ ಕೋಲಾರದಲ್ಲಿ ಶಾಸಕ ಶ್ರೀನಿವಾಸ್ ಗೌಡ ಕ್ಷೇತ್ರ ಬಿಟ್ಟುಕೊಡಲು ತಯಾರಿದ್ದಾರೆ. ಹೀಗಾಗಿ ನಾನು ಇಲ್ಲಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಜನರ ಆಶೀರ್ವಾದ ಇದ್ರೆ ಮಾತ್ರ ನಾವೆಲ್ಲಾ ಉಳಿಯಲು ಸಾಧ್ಯ. ಎಂದು ತಿಳಿಸಿದ್ದಾರೆ. ಸಿದ್ದರಾಮಯ್ಯ ವರುಣಾವನ್ನು ಪುತ್ರನಿಗೆ ತ್ಯಾಗ ಮಾಡಿ ಮೊದಲ ಬಾರಿಗೆ ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿದ್ದಾರೆ.