ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ರಾಜ್ಯ ರಾಜಧಾನಿಯ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಹೀಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಬೆಂಗಳೂರು ನಗರದತ್ತ ವಿಶೇಷ ಗಮನ ಹರಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ನಾಯಕರು ವಾರಕ್ಕೆ ಒಬ್ಬರಾದೂ ರಾಜ್ಯ್ದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮಿತ್ ಶಾ ಈ ಬಾರಿ ನಿರ್ಭಯಾ ನಿಧಿಯಿಂದ ಸೇಫ್ ಸಿಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಗೃಹ ವ್ಯವಹಾರಗಳ ಸಚಿವಾಲಯದ ಯೋಜನೆಗೆ ದೇಶದಾದ್ಯಂತ ಆಯ್ಕೆಯಾದ ಎಂಟು ನಗರಗಳಲ್ಲಿ ಬೆಂಗಳೂರು ಕೂಡ ಒಂದು.