ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಮುಖ್ಯಮಂತ್ರಿಗಳ ಆರ್.ಟಿ ನಗರ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಬಿಜೆಪಿ ನಾಯಕರ ವಿರುದ್ದ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಹೆಚ್. ವಿಶ್ವನಾಥ್ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿ ಮಾಡಿದ್ದು, ಸಾಕಷ್ಟು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.ನನ್ನ ರಕ್ತಾನೇ ಕಾಂಗ್ರೆಸ್ ರೀ, ಹೌದು ನಾನು ಕಾಂಗ್ರೆಸ್ ಪಕ್ಷವನ್ನು ಸೇರುತ್ತೇನೆ ಎಂದಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆ ಹೇಳಕೆ ಕೊಟ್ಟ ಬಳಿಕ ಹೆಚ್.ವಿಶ್ವನಾಥ್ ಅವರು ಮೊದಲ ಬಾರಿಗೆ ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನು ಕಾರಣ. ಒಂದು ವೇಳೆ ನಾನು ಕಾಂಗ್ರೆಸ್ ಗೆ ಬಂದ್ರು ಅದು ಪಕ್ಷಾಂತರವಲ್ಲ, ಮರಳಿ ಮನೆಗೆ, ನನ್ನ ಮನೆ ಕಾಂಗ್ರೆಸ್ ಎಂದು ಹೇಳಿದ್ದಾರೆ.