ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಜಗದೀಶ್ ಬುಧವಾರ ವಿಧಾನಸೌಧದಲ್ಲಿ ಅನಧಿಕೃತವಾಗಿ 10.50 ಲಕ್ಷ ರೂ. ಹಣವನ್ನು ಸಾಗಾಟ ಮಾಡುತ್ತಿದ್ದ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಆತ ವಿಧಾನಸೌಧಕ್ಕೆ ಯಾರಿಗೆ ಹಣ ಕೊಡಲು ಬಂದಿದ್ದ? ಪಿಡಬ್ಲ್ಯುಡಿ ಸಚಿವ ಸಿಸಿ ಪಾಟೀಲ್‌ಗೆ ಹಣ ಕೊಡಲು ಬಂದಿರಬೇಕು, ಇಲ್ಲವೇ ಮುಖ್ಯಮಂತ್ರಿಗಳಿಗೆ ಕೊಡೋದಕ್ಕೆ ಬಂದಿರಬೇಕು ಅಲ್ವಾ ಅದರ ಅರ್ಥ ವಿಧಾನಸೌಧದಲ್ಲೇ ಲಂಚ ನಡೆಯುತ್ತದೆ. ಮುಖ್ಯಮಂತ್ರಿಗಳ ಮೂಗಿನ ನೇರಕ್ಕೆ ಲಂಚ ನಡೆಯುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಅವರ ಬಳಿ ಇಷ್ಟೊಂದು ದೊಡ್ಡ ಮೊತ್ತದ ಹಣದ ಕುರಿತಾಗಿ ಮಾಹಿತಿ ಕೇಳಿದಾಗ ಅವರು ಸರಿಯಾಗಿ ಉತ್ತರ ನೀಡಿರಲಿಲ್ಲ. ಈ ಹಿನ್ನೆಲೆ ಪೊಲೀಸರು ಜಗದೀಶ್‌ನನ್ನು ಹಾಗೂ ಹಣವನ್ನು ವಶಕ್ಕೆ ಪಡೆದು ಎಫ್‌ಐಆರ್ ದಾಖಲಿಸಿದ್ದರು.