ವಿವಾಹಿತರು ಅಥವಾ ಅವಿವಾಹಿತ ಎಲ್ಲಾ ಮಹಿಳೆಯರು ಸುರಕ್ಷಿತ ವೈದ್ಯಕೀಯ ಗರ್ಭಪಾತ ಮಾಡಿಸಿಕೊಳ್ಳಬಹುದು: ಸುಪ್ರೀಂಕೋರ್ಟ್

ದೇಶದಲ್ಲಿ ಮಹಿಳೆಯರ ಗರ್ಭಪಾತದ ಕುರಿತಾಗಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹಿತರು ಅಥವಾ ಅವಿವಾಹಿತ ಎಲ್ಲಾ ವರ್ಗದ ಮಹಿಳೆಯರೂ ಸುರಕ್ಷಿತವಾದ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ತೀರ್ಪು ನೀಡಿದೆ. ಮದುವೆ ಆದವರು, ಮತ್ತು ಆಗದವರು ಎಂಬ ಬೇಧವನ್ನು ಗರ್ಭಪಾತ ಕಾನೂನಿನಲ್ಲಿ ಮಾಡಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಸಂತ್ರಸ್ಥೆ ಗರ್ಭಪಾತಕ್ಕೆ ಇಚ್ಚಿಸಿದರೆ ಅದನ್ನು ವೈವಾಹಿಕ ಅತ್ಯಾಚಾರ ಎಂದು ಪರಿಗಣಿಸಿ ಅವಕಾಶ ನೀಡಬೇಕು. ಸಾಮಾಜಿಕ ಬದಲಾವಣೆಗಳು ಮತ್ತು ಪರಿಸ್ಥಿತಿಗೆ ತಕ್ಕಂತೆ ಕಾನೂನಿನ ಜಾರಿ ಮತ್ತು ನಿರ್ಧಾರ ಬದಲಾಗಬೇಕು ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡುತ್ತಿದೆ

Leave a Reply

Your email address will not be published. Required fields are marked *