ಮೈಸೂರಿನ 413ನೇ ದಸರಾಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ನಾಡದೇವಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಅವರು ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಪುಷ್ಪಾರ್ಚನೆ ಮಾಡಿ ಮೈಸೂರು ದಸರಾಗೆ ಚಾಲನೆ ನೀಡಿ ಕನ್ನಡದಲ್ಲಿಯೇ ಭಾಷಣ ಪ್ರಾರಂಭಿಸಿದ ಅವರು ಎಲ್ಲಾ ಸಹೋದರ – ಸಹೋದರಿಯರಿಗೆ ನನ್ನ ನಮಸ್ಕಾರ ರಾಷ್ಟ್ರಪತಿ ಆದ ಮೇಲೆ ನಾನು ಭೇಟಿ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ. ರಾಷ್ಟ್ರಪತಿಯವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಾಥ್ ನೀಡಿದ್ದಾರೆ. ಮೈಸೂರು ದಸರಾಗೆ ಚಾಲನೆ ನೀಡಿದ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸರ್ಕಾರದ ವತಿಯಿಂದ ಮೈಸೂರು ಪೇಟಾ, ಮೈಸೂರು ಶಾಲು ಹೊದಿಸಿ ಸನ್ಮಾನ ಮಾಡಲಾಯಿತು. ಜೊತೆಗೆ ಚಾಮುಂಡಿ ದೇವಿಯ ಬೆಳ್ಳಿಯ ಮೂರ್ತಿ ನೀಡಿ ಗೌರವಿಸಲಾಯಿತು.