ಶಕ್ತಿ ಯೋಜನೆಯಿಂದ ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಅವರ ನೆರವಿಗೆ ಧಾವಿಸೋ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ – ರಾಮಲಿಂಗಾರೆಡ್ಡಿ

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಭೋಜೇಗೌಡ ಪ್ರಶ್ನೆ ಕೇಳಿದರು. ಶಕ್ತಿ ಯೋಜನೆ ಪರಿಣಾಮ ಆಟೋ ರಿಕ್ಷಾಗಳ ಮೇಲೆ ಬಿದ್ದಿದೆ. ಉಚಿತ ಬಸ್ ಪ್ರಯಾಣದಿಂದ ಆಟೋದವರು ಜೀವನ ಮಾಡಲು ಆಗುತ್ತಿಲ್ಲ. ರಾಜ್ಯದಲ್ಲಿ ಸುಮಾರು 5 ಲಕ್ಷ ಆಟೋ ಚಾಲಕರು ಇದ್ದಾರೆ. ಅವರಿಗೆ ಜೀವನ ಮಾಡಲು ಆಗುತ್ತಿಲ್ಲ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಯೋಜನೆ ಜಾರಿ ಆಗಿ ಒಂದು ತಿಂಗಳು ಆಗಿದೆ. ಆಟೋದವರಿಗೆ ಏನ್ ಸಮಸ್ಯೆ ಆಗಿದೆ ಅಂತ ನೋಡೋಣ. ಈವರೆಗೂ ಯಾವ ಆಟೋ ಚಾಲಕರ ಸಂಘದವರು ನನ್ನ ಬಳಿ ಬಂದು ಕಷ್ಟ ಅಂತ ಹೇಳಿಲ್ಲ. ಯಾವುದೇ ಆಟೋ ಚಾಲಕರು ನನಗೆ ಮನವಿ ಮಾಡಿಲ್ಲ. ಒಂದು ತಿಂಗಳು ಆಗಿದೆ, ಬಳಿಕ ಪರಿಶೀಲನೆ ಮಾಡಿ ಆಟೋದವರಿಗೆ ಸಮಸ್ಯೆಯಾದರೆ ಸರ್ಕಾರ ಪರಿಹಾರ ಕೊಡಲಿದೆ ಎಂದು ಭರವಸೆ ನೀಡಿದರು.

Leave a Reply

Your email address will not be published. Required fields are marked *