ಶತಾಯುಷಿ ಸಾಲುಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ನಿವೇಶನಹಂಚಿಕೆ

ಇದೀಗ ಶತಾಯುಷಿ ಸಾಲುಮರದ ತಿಮ್ಮಕ್ಕಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50X80 ಅಳತೆಯ ನಿವೇಶನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಬುಧವಾರ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ನಲ್ಲಿರುವ ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನೀಡಲಾಗಿದೆ. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ರಾಜೇಶ್ ಗೌಡ ಅವರು ನಿವೇಶನದ ನೋಂದಣಿ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ. ಬಿಡಿಎ ವತಿಯಿಂದ ಸಿಕ್ಕ ನಿವೇಶನವನ್ನು ಪಡೆದಿರುವ ಸಾಲು ಮರದ ತಿಮ್ಮಕ್ಕ ತನ್ನ ಇಳಿ ವಯಸ್ಸಿನಲ್ಲಿ ಮನೆಯನ್ನು ಕಟ್ಟುವ ಬಯಕೆಯನ್ನು ಸಹ ಹೊಂದಿದ್ದಾರೆ. ನಿವೇಶನವನ್ನು ಪಡೆದು ಎಸ್.ಆರ್. ವಿಶ್ವನಾಥ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ನಂತರ ಬಿಡಿಎ ಅಧ್ಯಕ್ಷರು ಮತ್ತು ಆಯುಕ್ತರು ಪರಿಸರ ಪ್ರೇಮಿ, ಶತಾಯುಷಿ ತಿಮ್ಮಕ್ಕರನ್ನು ಸನ್ಮಾನಿಸಿ ನಿವೇಶನದ ನೋಂದಣಿ ಪತ್ರವನ್ನು ವಿತರಿಸಿದರು.

Leave a Reply

Your email address will not be published.