ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ತೆಲಂಗಾಣಕ್ಕೆ ಹೊರಟ ಟ್ರಬಲ್‌ಶೂಟರ್‌ಡಿಕೆ ಶಿವಕುಮಾರ್‌ಕನಕಪುರ ಬಂಡೆಗೆ ಹೊಸ ಟಾಸ್ಕ್‌

ತೆಲಂಗಾಣ ವಿಧಾನಸಭಾ ಎಕ್ಸಿಟ್‌ಪೋಲ್‌ಸಮೀಕ್ಷೆಯಲ್ಲಿ ಕಾಂಗ್ರೆಸ್‌ಬಹುಮತ ಪಡೆಯಲಿದೆ ಎಂದು ತಿಳಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ಕಾಂಗ್ರೆಸ್‌ಹೈಕಮಾಂಡ್‌ಸೂಚನೆ ಮೇರೆಗೆ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ತೆಲಂಗಾಣದತ್ತ ಮುಖ ಮಾಡಿದ್ದಾರೆ., ತೆಲಂಗಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆಗೆ ಸದಾಶಿವನಗರದಲ್ಲಿ ಡಿ ಕೆ ಶಿವಕುಮಾರ್‌ಮಾತನಾಡಿ,ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ತೆಲಂಗಾಣ ಚುನಾವಣೆ ಫಲಿತಾಂಶ ಬರುವ ಹಿನ್ನೆಲೆಯಲ್ಲಿ ತಾವು ತೆರಳುತ್ತೀರಾ ಎಂಬ ಪ್ರಶ್ನೆಗೆ ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ.ಇನ್ನೂ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ ಎಂದು ಹೇಳಿದರು. ರಾಜಸ್ಥಾನದಲ್ಲಿ ತೀವ್ರ ಸ್ಪರ್ಧೆ ಇರುವ ಮುನ್ಸೂಚನೆ ಸಿಕ್ಕಿದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ನನ್ನದೇ ಆದ ಅಭಿಪ್ರಾಯವಿದೆ. ಮತಯಂತ್ರದಲ್ಲಿರುವ ಮತದ ಮಾಹಿತಿ ನಿಮಗೂ ಗೊತ್ತಿಲ್ಲ, ನಮಗೂ ಗೊತ್ತಿಲ್ಲ. 48 ತಾಸುಗಳ ನಂತರ ಎಲ್ಲವೂ ಹೊರಬೀಳಲಿದೆ. ಈ ಸಮೀಕ್ಷೆಗಳು ಸುಮಾರು 10 ಸಾವಿರ ಮತದಾರರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಲಾಗಿದೆ. ನಾವು ನಮ್ಮ ರಾಜ್ಯದಲ್ಲಿ ಪ್ರತಿ ಕ್ಷೇತ್ರದಲ್ಲಿ ಟಿಕೆಟ್ ನೀಡುವಾಗ 1 ಲಕ್ಷದಷ್ಟು ಜನರನ್ನು ಸಮೀಕ್ಷೆ ಮಾಡಿದ್ದೆವು. ತೆಲಂಗಾಣದಲ್ಲಿ ನಾನು 20 ಕ್ಷೇತ್ರ ಓಡಾಡಿದ್ದೇನೆ. ಬೇರೆ ಕ್ಷೇತ್ರಗಳಲ್ಲೂ ವರದಿ ಬಹಳ ಉತ್ತಮವಾಗಿದೆ. ನೆರೆ ರಾಜ್ಯದ ನಾಯಕರು ನಮ್ಮ ರಾಜ್ಯದ ಚುನಾವಣೆಯಲ್ಲಿ ಕೆಲಸ ಮಾಡಿದ್ದರು. ನಮ್ಮ ನಾಯಕರು ಅಲ್ಲಿನ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ನೆರೆ ರಾಜ್ಯದ ಚುನಾವಣೆಯಲ್ಲಿ ನಮಗೆ ನಮ್ಮದೇ ಆದ ಜವಾಬ್ದಾರಿ ಇರುತ್ತದೆ ಎಂದು ಶಿವಕುಮಾರ್‌ಹೇಳಿದ್ದಾರೆ.

Leave a Reply

Your email address will not be published. Required fields are marked *