ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಅರ್ಜಿ – ಸಿದ್ದರಾಮಯ್ಯಗೆ ಹೈಕೋರ್ಟ್‌ನಿಂದ ನೋಟಿಸ್‌ಜಾರಿ

ಸಿದ್ದರಾಮಯ್ಯನವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಸಿಎಂಗೆ ನೋಟಿಸ್‌ಜಾರಿ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಪಕ್ಷ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಿತ್ತು. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್‌123 (1) ಮತ್ತು ಸೆಕ್ಷನ್‌123 (2) ಪ್ರಕಾರ ಮತದಾರರ ಮೇಲೆ ಇದು ಪ್ರಭಾವ ಬೀರಿದ್ದು, ಇದು ಲಂಚಕ್ಕೆ ಸಮವಾಗಿದೆ. ಸೆಕ್ಷನ್‌123 (4)ರ ಪ್ರಕಾರ ಆಮಿಷವೊಡ್ಡಿ ಪ್ರಚಾರ ನಡೆಸುವುದು ಅಪರಾಧ. ಈ ಕಾರಣಕ್ಕೆ ಅಕ್ರಮ ಎಸಗಿದ್ದರಿಂದ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಸಿದ್ದರಾಮಯ್ಯ ಅವರ ಅನುಮತಿಯನ್ನು ಪಡೆಯಲಾಗಿದ್ದು ಕಾರ್ಡ್‌ಗಳಿಗೆ ಅವರ ಸಹಿಯನ್ನು ಹಾಕಲಾಗಿದೆ. ಈ ಗ್ಯಾರಂಟಿ ಯೋಜನೆಗಳು ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಅಭ್ಯರ್ಥಿಗೆ ಮತ ಹಾಕಲು ಮತದಾರರನ್ನು ಪ್ರೇರೇಪಿಸಿದೆ. ಮೈಸೂರಿನ ವರುಣಾ ಹೋಬಳಿಯ ಕೂಡನಹಳ್ಳಿ ಗ್ರಾಮದ ಕೆಎಂ ಶಂಕರ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ಸಿದ್ದರಾಮಯ್ಯನವರಿಗೆ ವಿವರಣೆ ನೀಡುವಂತೆ ಕೋರಿ ನೋಟಿಸ್‌ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟೆಂಬರ್‌1ಕ್ಕೆ ಮುಂದೂಡಿದೆ.

Leave a Reply

Your email address will not be published. Required fields are marked *