ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಿದ್ದು, ಮುಂದೆ ಜೆಡಿಎಸ್ಶಾಸಕರು ಹಾಗೂ ಬಿಜೆಪಿ ಶಾಸಕರೂ ನಮ್ಮ ಪಕ್ಷ ಸೇರ್ಪಡೆಯಾಗಲಿದ್ದಾರೆ’ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ಪಕ್ಷದಿಂದ ನಾಯುಕರು ಆಗಮಿಸುತ್ತಿದ್ದಾರೆ. ಎಚ್.ವಿಶ್ವನಾಥ್ಅವರು ಪಕ್ಷ ಸೇರ್ಪಡೆಯಾಗಲು ದಿನಾಂಕ ನಿಗದಿಯಾಗಿದೆ. ಬಿಜೆಪಿಯಿಂದಲೂ ಶಾಸಕರು ಕಾಂಗ್ರೆಸ್ಸೇರಲು ಬಹಳಷ್ಟುಮಂದಿ ಸಂಪರ್ಕಿಸಿದ್ದು, ಅವರು ಪಕ್ಷಕ್ಕೆ ಬಂದರೆ ಅವರಿಗೆ ಸ್ಥಾನ ನೀಡಬೇಕಾಗುತ್ತದೆ. ಅದು ಎಲ್ಲ ಕಡೆಯೂ ಸಾಧ್ಯವಾಗುವುದಿಲ್ಲ. ಹೀಗಾಗಿ ಯೋಚಿಸಿ ಕ್ರಮ ಕೈಗೊಳ್ಳುತ್ತೇವೆ. ಯಾರೆಲ್ಲಾ ಬರುತ್ತಾರೆ ಎಂದು ನಾನು ಈಗ ಹೇಳುವುದಿಲ್ಲಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ನೆಲಮಂಗಲದ ಜೆಡಿಎಸ್ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡಿದರು.