ಗವರ್ನರ್‌ಶಕ್ತಿಕಾಂತ ದಾಸ್‌ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು ಮೂರು ದಿನಗಳ ಸಭೆ ನಡೆಸಿ ರೆಪೋ ದರವನ್ನು ಏರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಅಮೆರಿಕದ ಕೇಂದ್ರೀಯ ಬ್ಯಾಂಕ್‌ಫೆಡರಲ್‌ರಿಸರ್ವ್ ಸತತ ಮೂರನೇ ಬಡ್ಡಿದರದ ಹೆಚ್ಚಳ ಮಾಡಿದ ಬೆನ್ನಲ್ಲೇ ಆರ್‌ಬಿಐ ರೆಪೋ ದರವನ್ನು ಏರಿಕೆ ಮಾಡಿದೆ. ಆಗಸ್ಟ್‌ನಲ್ಲಿ 50 ಬೇಸಿಸ್ ಪಾಯಿಂಟ್‌ಏರಿಕೆ ಮಾಡಿದ್ದರಿಂದ ರೆಪೋ ದರ ಶೇ.5.4ಕ್ಕೆ ಏರಿತ್ತು. ರೆಪೋ ದರ ಏರಿಕೆಯಾದ ಕಾರಣ ಗೃಹ, ವಾಹನ ಸಾಲದ ಬಡ್ಡಿ ದರ ಏರಿಕೆಯಾಗಲಿದೆ. ಮಿತಿಮೀರಿದ ಹಣದುಬ್ಬರವನ್ನು ನಿಯಂತ್ರಿಸಲು ಕಳೆದ ವಾರ ಫೆಡರಲ್‌ರಿಸರ್ವ್‌ಶೇ. 0.75ರಷ್ಟು ಬಡ್ಡಿದರವನ್ನು ಹೆಚ್ಚಳ ಮಾಡಿತ್ತು ಈ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿಶೇ.7.2 ರಷ್ಟು ಬೆಳವಣಿಗೆಯಾಗಲಿದೆ ಎಂದು ಆರ್‌ಬಿಐ ಅಂದಾಜಿಸಿತ್ತು. ಆದರೆ ಈಗ ಶೇ.7 ರಷ್ಟು ಅಭಿವೃದ್ಧಿಯಾಗಬಹುದು ಎಂದು ಅಂದಾಜಿಸಿದೆ.