ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಇದೀಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸತೀಶ್ ಜಾರಕಿಹೊಳಿ ಅರೆಬರೆ ಓದಿದ ವ್ಯಕ್ತಿ. ಯಾವುದೇ ಆಳವಾದ ಅಧ್ಯಯನ ಇಲ್ಲದೆ ಮಾತನಾಡಿದ್ದಾರೆ. ಅಲ್ಪಸಂಖ್ಯಾತ ಮತ ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ. ಸತೀಶ್ ಹೇಳಿಕೆಯಿಂದ ಭಾರತದ ಭಾವನೆಗೆ ಧಕ್ಕೆಯಾಗಿದೆ. ದೇಶದ್ರೋಹದ ಕೆಲಸ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಯಾಕೆ ಈ ವಿಚಾರದಲ್ಲಿ ಮೌನವಹಿಸಿದ್ದಾರೆ. ನಿಮ್ಮ ಮೌನ ಸತೀಶ್ ಮಾತಿಗೆ ಸಮ್ಮತಿನಾ? ಸಿಎಂ ಬಸವರಾಜ ಬೊಮ್ಮಾಯಿ ಕೆಂಡಾಮಂಡಲರಾಗಿದ್ದಾರೆ.