ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ,ಭಾರತದ ಸನಾತನ ಧರ್ಮ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವ ತಮಿಳುನಾಡು ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಬಿಜೆಪಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ. ಸನಾತನ ಧರ್ಮ ಸರ್ವೇಜನ ಸುಖಿನೊಭವಂತು ಎಂದು ತಿಳಿಸಿತ್ತದೆ. ಕೇವಲ ಮಾನವರಷ್ಟೇ ಅಲ್ಲ ಎಲ್ಲ ಜೀವಿಗಳು ಸುಖವಾಗಿರಲಿ ಎಂದು ಸನಾತನ ಧರ್ಮ ಬಯಸುತ್ತದೆ. ಇಂತಹ ಸನಾತನ ಧರ್ಮವನ್ನು ಕಿತ್ತೊಗೆಯಬೇಕು ಎಂದು ಆಕ್ಷೇಪಾರ್ಹವಾಗಿ ಹಿಟ್ಲರ್ ಮನಸ್ಥಿತಿಯಲ್ಲಿ ಹೇಳಿಕೆಗಳು ಪ್ರಜಾಪ್ರಭುತ್ವ ವಿರೋಧಿ ಆಗಿದೆ. ಸ್ಟಾಲಿನ್ ಹೇಳಿಕೆ ಅವರ ಹಿಟ್ಲರ್ ಮನಸ್ಥಿತಿಯ ಪ್ರತಿಬಿಂಬವಾಗಿದೆ. ಚುನಾವಣೆಯಲ್ಲಿ ಒಂದು ವರ್ಗದವರ ಸೆಳೆಯಲು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದು, ಕೂಡಲೇ ಉದಯನಿಧಿ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.