ವೇತನ ಪರಿಷ್ಕರಣೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾರ್ಚ್21ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು,ಆದರೆ, ಸಾರಿಗೆ ನೌಕರರ ವೇತನವನ್ನು ಶೇ.15ರಷ್ಟು ಹೆಚ್ಚಳ ಮಾಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಫರ್‌ಅನ್ನ ಸಾರಿಗೆ ನೌಕರರು ತಿರಸ್ಕರಿಸಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತು ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ. ನಿಗದಿಯಂತೆ ಮಾರ್ಚ್21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘದ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬರಾವ್‌ಸ್ಪಷ್ಟಪಡಿಸಿದ್ದಾರೆ. ಸಾರಿಗೆ ನೌಕರರಿಗೆ ಶೇ.25ರಷ್ಟು ವೇತನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆದು ಮಾತನಾಡಿದರೆ ಸಮಸ್ಯೆ ಇತ್ಯರ್ಥ ಆಗುತ್ತದೆ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.