ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ಸದನದ ಒಳಗೂ ಹೊರಗೂ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಹೆಚ್ಡಿಕೆ ಶಪಥ

ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.ಈ ವೇಳೆ ಹೆಚ್ಡಿಕೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಹೊರಗೂ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಪಥ ಮಾಡಿದ್ದಾರೆ. ವಿರೋಧ ಪಕ್ಷದಲ್ಲಿ ನಾನು ಇದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ. ಕಾಂಗ್ರೆಸ್ನವರಿಗೆ ಸರ್ಕಾರ ಬೇಕಿಲ್ಲ. ಭೂಮಿ ಲಪಟಾಯಿಸೋದು ಬೇಕು. ಇದು ಒಂದು ರೀತಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ. ಮುಂದುವರಿದು, ಸದನ ಹೇಗೆ ನಡೆಯುತ್ತಿದೆ ಅನ್ನೋದನ್ನ ಗಮನಿಸಿದ್ದೀರಿ. ಸದನದ ಕಲಾಪದ ಮೌಲ್ಯಗಳು ಕುಸಿಯುತ್ತಿವೆ. ಶಿಷ್ಟಾಚಾರದ ಹೆಸರಲ್ಲಿ ಅಧಿಕಾರಿಗಳ ದುರುಪಯೋಗ ಆಗಿದೆ. ಐಎಎಸ್ ನಿವೃತ್ತ ಅಧಿಕಾರಿ ಮದನ್ ಗೋಪಾಲ್ ಅವರೂ ಇದನ್ನೇ ಹೇಳಿದ್ದಾರೆ ಎಂದು ಟೀಕಿಸಿದ್ದಾರೆ.

Leave a Reply

Your email address will not be published. Required fields are marked *